ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. 
ಮೈಸೂರು ರಾಜ್ಯವು (ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. 

ರಾಜ್ಯದ ಹೆಸರು ನವೆಂಬರ್ ೧, ೧೯೭೩ ರಂದು “ಕರ್ನಾಟಕ” ಎಂದು ಬದಲಾಯಿತು.

ಇಂದು (1/11/2020) ಅಭ್ಯುದಯ ವಿದ್ಯಾರ್ಥಿಗಳು ತಮ್ಮ ಕಲಿಕಾ ಕೇಂದ್ರಗಳಲ್ಲಿ / ಮನೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದರು

Happy Kannada Rajyotsava!!
Tagged on: